ಆಪ್‌ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು ನಿರಾಕರಿಸಿದ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಅಕ್ರಮಣ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್‌ ಆದ್ಮಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ.

ಅವರು ಜಾಮೀನು ನೀಡುವಂತೆ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಸತ್ಯೇಂದ್ರ ಜೈನ್ ಅವರನ್ನು ಮೇ 30 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಆಮ್ ಆದ್ಮಿ ಪಕ್ಷದ ಮಾಜಿ ಸಚಿವರ ಕುಟುಂಬಕ್ಕೆ ಸಂಬಂಧಿಸಿದ 4.81 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಈ ವರ್ಷದ ಏಪ್ರಿಲ್‌ನಲ್ಲಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಇಡಿ ಜಪ್ತಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!