spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಕಾಳಿ ಸ್ವಾಮೀಜಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು

 ಹೊಸ ದಿಗಂತ ವರದಿ, ಶ್ರೀರಂಗಪಟ್ಟಣ :

ಶ್ರೀರಂಗಪಟ್ಟಣದ ಜಾಮೀಯ ಮಸೀದಿ ಕೆಡುವುದರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ನ್ಯಾಯಾಂಗ ಬಂಧನದಲ್ಲಿದ್ದ ಕಾಳಿ ಮಠದ ರಿಷಿಕುಮಾರ ಸ್ವಾಮೀಜಿ ಅವರಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯವು ಷರತ್ತು ಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿ ಆದೇಶಿಸಿದೆ.
ನ್ಯಾಯಾಧೀಶರಾದ ಆಯೇಷಾ ಬಿ ಮಜೀದಾ ಅವರು ರಿಷಿಕುಮಾರ್ ಸ್ವಾಮೀಜಿಗೆ 1 ಲಕ್ಷ ರು. ಮೌಲ್ಯದ ಬಾಂಡ್ ನೊಂದಿಗೆ, ಪ್ರತಿ ಭಾನುವಾರ ಪಟ್ಟಣ ಠಾಣೆಗೆ ಹಾಜರಾಗಿ ಸಹಿ ಹಾಕುವುದರ ಜೊತೆಗೆ ಸ್ಥಳೀಯ ವ್ಯಕ್ತಿಯ ಭದ್ರತೆಯ ಮೇರೆಗೆ ಷರತ್ ಬದ್ದ ಜಾಮೀನು ಮಂಜೂರು ಮಾಡಿದ್ದಾರೆ.
ಸ್ವಾಮೀಜಿ ಪರ ವಕೀಲ ಸಿದ್ದೇಶ್ ಮತ್ತು ಬಾಲರಾಜ್ ಜಾಮೀನಿಗೆ ಅರ್ಜಿ ಸಲ್ಲಿಸಿ ಜಾಮೀನು ಕೊಡಿಸುವಲ್ಲಿ ಯಶಸ್ಚಿಯಾಗಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap