ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಗೆ ಸಿನಿಮಾ ಶೂಟಿಂಗ್ ಸಲುವಾಗಿ ವಿದೇಶಕ್ಕೆ ತೆರಳಲು ಹೊಸ ದಿನಾಂಕಕ್ಕೆ ಕೋರ್ಟ್ ಅನುಮತಿ ನೀಡಿದೆ. ಜುಲೈ 11ರಿಂದ ಜುಲೈ 30ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿದೆ.
‘ಡೆವಿಲ್’ ಸಿನಿಮಾ ಚಿತ್ರೀಕರಣಕ್ಕಾಗಿ ಯುರೋಪ್ ಹಾಗೂ ದುಬೈಗೆ ದರ್ಶನ್ ಅವರು ತೆರಳಲಿದ್ದಾರೆ. ಈ ಹಿಂದೆ ಜುಲೈ 1ರಿಂದ 25ರವರೆಗೆ ಕೋರ್ಟ್ ಅನುಮತಿ ನೀಡಿತ್ತು. ಆದರೆ ದಿನಾಂಕ ಬದಲಾವಣೆ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದರು.
ಈ ಮೊದಲು ಸಿನಿಮಾ ಶೂಟಿಂಗ್ಗಾಗಿ ಜುಲೈ 1ರಿಂದ ಜುಲೈ 25ರವರೆಗೆ ಯೂರೋಪ್, ದುಬೈಗೆ ಶೂಟಿಂಗ್ ತೆರಳಲು ಅನುಮತಿ ಕೋರಿದ್ದರು. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದಲ್ಲಿ ಕೋರ್ಟ್ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲವೆಂದು ಷರತ್ತು ವಿಧಿಸಿತ್ತು. ಹೀಗಾಗಿ ಷರತ್ತಿನಿಂದ ವಿನಾಯಿತಿ ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು.
ಆದರೆ ಕೋರ್ಟ್ ನೀಡಿದ್ದ ಈ ಅವಧಿಯಲ್ಲಿ ವಿದೇಶಕ್ಕೆ ತೆರಳಲು ಸಾಧ್ಯವಾಗದ್ದರಿಂದ ಜುಲೈ 11ರಿಂದ ಜುಲೈ 30ರವರೆಗೆ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದರು. ಇಂದು (ಜುಲೈ 8) ಅದರ ವಿಚಾರಣೆ ನಡೆದಿದೆ. ಜುಲೈ 11ರಿಂದ ಜುಲೈ 30ರವರೆಗೆ ಸಿನಿಮಾದ ಶೂಟಿಂಗ್ ಸಲುವಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿದೆ.