ಕೋರ್ಟ್‌ ಆದೇಶ : ಎಚ್‌ಡಿಕೆ ಬಿಡದಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.

ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ.

ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್​ಐಟಿ ರಚನೆ ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು.

14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!