Thursday, December 8, 2022

Latest Posts

ಸಚಿವ ಡಾ.ಕೆ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಮಾನನಷ್ಟ ಆರೋಪ ಕೇಸ್ ನಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಎಂಬುವರು ಮಾನ ಹಾನಿಕರ ಹೇಳಿಕೆ ಕೇಸ್ ದಾಖಲಿಸಿದ್ದರು. ಇದಷ್ಟೇ ಅಲ್ಲದೇ ಈ ಸಂಬಂಧದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಒದಗಿಸಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾದೀಶರಾದಂತ ಜೆ ಪ್ರೀತ್ ಅವರು, ಸಚಿವ ಡಾ.ಕೆ ಸುಧಾಕರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣವನ್ನು ದಾಖಲಿಸುವಂತೆ ನಿರ್ದೇಶಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!