ನ್ಯಾಯಾಲಯದ ಆದೇಶ ಪಾಲನೆ ಎಲ್ಲರ ಕರ್ತವ್ಯ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಕ್ಕಳ ಶಿಕ್ಷಣ ಬಹಳ ಮುಖ್ಯ. , ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡಬೇಕಾಗಿದ್ದು ಎಲ್ಲರ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವ ಶಾಂತಿ ಸುವ್ಯವಸ್ಥೆ, ಕಂಗೆಟ್ಟಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ನಿನ್ನೆ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೆ. ಇದರ ಬೆನ್ನಲ್ಲೇ ಇಂದು ಹೈಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿದರು.
ಮಂಡಿಸಿದ್ದ ನಿಲುವಳಿ ಸಂಬಂಧ ಸದನದಲ್ಲಿ ಈ ಬಗ್ಗೆ ನಾಳೆ ಚರ್ಚೆ ಮಾಡುತ್ತೇನೆ. ಸಭಾಧ್ಯಕ್ಷರು ಅವಕಾಶ ನೀಡುತ್ತಾರೆಂದು ನಂಬಿದ್ದೇನೆ ಎಂದು ಹೇಳಿದರು.
ಹಿಂಸಾಚಾರ ಮತ್ತು ಗಲಾಟೆಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇವೆಲ್ಲವೂ ಸರಿ ಹೋಗಬೇಕಿದೆ ಎಂದು ಹೆಚ್ ಡಿಕೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!