ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಚಿಕ್ಕೋಡಿ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಂದಿಪರ್ವತ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ನಾರಾಯಣ ಮಾಳಿ ಹಾಗೂ ಹಸನ್ ಸಾಬ್ ಆರೋಪಿಗಳನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದು, ಇಂದು ಚಿಕ್ಕೋಡಿ 7ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.