ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ.
3 ತಿಂಗಳ ಒಳಗಡೆ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಕೋರ್ಟ್ ಆದೇಶಿಸಿದೆ. ಮುಡಾದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ಗೆ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದರು.
ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್ ಮುಂದಿನ ಆದೇಶ ಪ್ರಕಟವಾಗುವರೆಗೆ ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿತ್ತು.