ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉಗ್ರ ನಾಸಿರ್‌ಗೆ ನೆರವು ನೀಡಿದ್ದ ಆರೋಪದಲ್ಲಿ ಬಂಧನವಾಗಿದ್ದ ಮೂವರು ಶಂಕಿತ ಉಗ್ರರನ್ನು6 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಅನೀಸ್ ಫಾತಿಮಾ, ಡಾ. ನಾಗರಾಜ್, ಹಾಗೂ ಎಎಸ್‌ಐ ಚಾನ್ ಪಾಷಾನನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆಯ ಬಳಿಕ ಮೂವರು ಉಗ್ರರನ್ನು ಎನ್‌ಐಎ ಕಸ್ಟಡಿಗೆ ನೀಡಲಾಗಿದೆ.
ರಾಜ್ಯದಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಭರ್ಜರಿ ಕಾರ್ಯಾಚರಣೆ ನಡೆಸಿ, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿತ್ತು.