ನಟ ಕಿಚ್ಚ ಸುದೀಪ್‌ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ನಿರ್ಮಾಪಕ ಕೆ.ಸಿ.ಎನ್‌ ಕುಮಾರ್‌ ಗೆ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ನಿರ್ಮಾಪಕ ಕೆ.ಸಿ.ಎನ್‌ ಕುಮಾರ್‌ ಮತ್ತು ಎಂ.ಎನ್. ಸುರೇಶ್‌ ಗೆ ನ್ಯಾಯಾಲಯ ಮಧ್ಯಂತರ ಆದೇಶವನ್ನು ಹೊರಡಿಸಿದೆ.

ನಟ ಸುದೀಪ್ ಮತ್ತು ನಿರ್ಮಾಪಕ ಎಂಎನ್ ಕುಮಾರ್ ಕಾಲ್ ಶೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ಮಾಡಿದ 9ನೇ ಸಿಟಿ ಸಿವಿಲ್ ಕೋರ್ಟ್‌ ಸುದೀಪ್ ಪರ ಮಧ್ಯಂತರದ ಆದೇಶ ನೀಡಿದೆ.

ಪ್ರತಿವಾದಿಗಳು ಕೆಸಿಎನ್‌ ಕುಮಾರ್ ಹಾಗೂ ಎಂ.ಎನ್. ಸುರೇಶ್‌ (KCN Kumar and MN Suresh) ಸುದೀಪ್ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಆದೇಶ ಹೊರಡಿಸಲಾಗಿದೆ.

ಇನ್ನು ಕುಮಾರ್ ಹಾಗೂ ಸುರೇಶ್ ಅವರು ಕೇವಲ ನಟ ಸದೀಪ್‌ ಮಾತ್ರವಲ್ಲದೇ ಅವರ ಕುಟುಂಬದ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ನಿರ್ಬಂಧ ಹೇರಲಾಗಿದೆ. ಇನ್ನು ಮಾಧ್ಯಮಗಳ ಮುಂದೆಯೂ ಯಾವುದೇ ಹೇಳಿಕೆ ನೀಡಬಾರದೆಂದು ಆದೇಶ ಹೊರಡಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಅಕ್ಟೋಬರ್ 9ಕ್ಕೆ ವಿಚಾರಣೆ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!