April 21, 2026
Tuesday, April 21, 2026
spot_img

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾನು ಕೂಡ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದೆ ಎಂದ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಈ ಸಂಬಂಧ ಹೆಚ್‌ಆರ್ ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ.

ಡಾ. ಜಿ. ಪರಮೇಶ್ವರ್ ಅವರು ಬೆಟ್ಟಿಂಗ್ ವಿಚಾರವಾಗಿ ಹೇಳಿಕೆ ನೀಡುವ ಸಂದರ್ಭ, ನಾನು ಕೂಡ ಕಬಡ್ಡಿ ಟೂರ್ನಿಯಲ್ಲಿ 500 ರೂ. ಬೆಟ್ಟಿಂಗ್ ಕಟ್ಟಿಕೊಂಡು ಸೋತಿದ್ದೆ ಎಂದು ಹೇಳಿದ್ದರು. ಇದೀಗ ಈ ಹೇಳಿಕೆ ಅವರಿಗೆ ಮುಳುವಾಗಿದ್ದು, ಕೂಡಲೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಕೊಡಿಗೇಹಳ್ಳಿ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !