ಮಳಲಿ ಮಸೀದಿ ವಿವಾದ: ವಿಚಾರಣೆ ಮತ್ತೆ ಮುಂದೂಡಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಳಲಿ ಮಸೀದಿ ವಿವಾದ ಪ್ರಕರಣದ ವಿಚಾರಣೆಯನ್ನು ಮತ್ತೆ ಕೋರ್ಟ್ ಮುಂದೂಡಿದೆ.
ಇಂದು(ಶುಕ್ರವಾರ) ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ವಾದ-ವಿವಾದ ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಿದೆ.
ಏ.21 ರಂದು ನವೀಕರಣ ಕಾಮಗಾರಿ ವೇಳೆ ದೇಗುಲ ಶೈಲಿ ಕಟ್ಟಡ ಪತ್ತೆಯಾಗಿತ್ತು. ಈ ವಿಚಾರದಲ್ಲಿ ವಿಹಿಂಪ ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿತ್ತು. ಇದರ ವಿಚಾರಣೆ ಮಂಗಳೂರಿನ ಮೂರನೇ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!