ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಟ ಕಮಲ ಹಾಸನ್‌ಗೆ ಬೆಂಗಳೂರು ಸತ್ರ ನ್ಯಾಯಾಲಯ ಆದೇಶಿಸಿದೆ.
ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆ ನಿರ್ಬಂಧ ಕೋರಿ ಮಹೇಶ್ ಜೋಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 31ನೇ ಸಿಟಿ ಸಿವಿಲ್ ನ್ಯಾಯಾಲಯ, ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆಯನ್ನು ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದರಿಂದ ಅಥವಾ ಮುಂದಿನ ವಿಚಾರಣೆಯ ದಿನಾಂಕದವರೆಗೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಿದೆ.
ಕಮಲ್ ಹಾಸನ್ ಅಥವಾ ಅವರ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಇದು ಅನ್ವಯವಾಗುತ್ತದೆ ಎಂದು ಹೇಳಿದೆ. ಅಲ್ಲದೆ, ಅರ್ಜಿ ಸಂಬಂಧ ಕಮಲ್ ಹಾಸನ್ ಅವರಿಗೆ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯವು, ವಿಚಾರಣೆಯನ್ನು ಆ.30ಕ್ಕೆ ಮುಂದೂಡಿದೆ.
ಥಗ್ ಲೈಫ್ ಚಿತ್ರದ ಆಡಿಯೊ ಬಿಡುಗಡೆ ವೇಳೆ ಮಾತನಾಡಿದ್ದ ನಟ ಕಮಲ್ ಹಾಸನ್, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದರು. ಈ ಹೇಳಿಗೆ ಭಾರೀ ವಿವಾದ ಸೃಷ್ಟಿಸಿತ್ತು. ಚಿತ್ರ ಬಿಡುಗಡೆಗೆ ಕನ್ನಡಪರ ಸಂಘಟನೆಗಳು ಮತ್ತು ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿ ವಿರೋಧ ವ್ಯಕ್ತಪಡಿಸಿದ್ದವು.