March 15, 2026
Sunday, March 15, 2026
spot_img

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಜಂಕ್ಷನ್ ನಲ್ಲಿ ಸಂಚಾರ ನಿಯಮ ಫಲಕ ಹಿಡಿದು ನಿಲ್ಲುವ ಶಿಕ್ಷೆ ನೀಡಿದ ಕೋಟ್೯

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣದಲ್ಲಿ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ದ ಐ ಎಂ ವಿ ಕಾನೂನು ಅಡಿಯಲ್ಲಿ ಪ್ರಕರಣ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಸಮುದಾಯ ಸೇವೆ ಶಿಕ್ಷೆ ವಿಧಿಸಿ ಆದೇಶಿಸಿದ ಘಟನೆ ನಡೆದಿದೆ.

ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬಾತ ಪದೇ ಪದೇ ನಿಯಮ ಉಲ್ಲಂಘನೆ ಕುರಿತು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಹಿನ್ನಲೆಯಲ್ಲಿ ಎಸ್ ಸಿ ಜೆ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ನ್ಯಾಯಾಲಯವು ಆರೋಪಿಗೆ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಮೂರು ಸಾವಿರ ದಂಡವನ್ನು ಹಾಗೂ ಮೂರು ಪ್ರಕರಣಗಳಲ್ಲಿ ತಲಾ ಐದು ದಿನಗಳಂತೆ ದಿ: 15/03/2026 ರಿಂದ ದಿ: 29/03/2026 ರವರೆಗೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆಯನ್ನು ನಿರ್ವಹಿಸುವಂತೆ ಹಾಗೂ ಸಂಚಾರ ನಿಯಮಗಳನ್ನು ಒಳಗೊಂಡ ಫಲಕಗಳನ್ನು ಹಿಡಿದು ಸುಳ್ಯ ಪೇಟೆಯ ಜಂಕ್ಷನ್ ಗಳಲ್ಲಿ ನಿಂತು ಸಾರ್ವಜನಿಕರಿಗೆ ಸಂಚಾರ ನಿಯಮ ಪಾಲನೆಯ ಅರಿವನ್ನು ಮೂಡಿಸುವಂತೆ ಆದೇಶಿಸಿದ್ದು ಜೊತೆಗೆ ಆರೋಪಿತನ ಚಾಲನ ಪರವಾನಿಗೆಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ಆದೇಶಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !