ಸಾಲ ಹಿಂತಿರುಗಿಸದ ಆರೋಪ: ನಟಿ ಶಿಲ್ಪಾ ಶೆಟ್ಟಿ, ಶಮಿತಾ ಶೆಟ್ಟಿ, ತಾಯಿಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಸಹೋದರಿ ಶಮಿತಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.
ಇದೀಗ ಇವರ ಮೇಲೆ ಪಡೆದ ಸಾಲವನ್ನು ಮರುಪಾವತಿ ಮಾಡದ ಆರೋಪದಲ್ಲಿ ಸಲ್ಲಿಕೆಯಾದ ದೂರಿನ ಅನ್ವಯ ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಉದ್ಯಮಿ ಪರ್ಹಾದ್ ಅಮ್ರಾ ಅವರು 21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿದೆ. ಹೀಗಾಗಿ ಫೆಬ್ರವರಿ 28ರಂದು ಮೂವರೂ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಾಲಯ ಆದೇಶಿಸಿದೆ.
ಶಿಲ್ಪಾ ಶೆಟ್ಟಿ ಅವರ ತಂದೆ ಸುರೇಂದ್ರ ಶೆಟ್ಟಿ ಅವರು 2015ರಲ್ಲಿ ಸಾಲ ಪಡೆದಿದ್ದರು ಮತ್ತು 2017ರ ಜನವರಿಯೊಳಗೆ ಸಾಲ ಮರುಪಾವತಿ ಮಾಡಬೇಕಾಗಿತ್ತು. 2016ರಲ್ಲಿ ಸುರೇಂದ್ರ ಶೆಟ್ಟಿ ನಿಧನರಾಗಿದ್ದು, ಕುಟುಂಬಸ್ಥರು ಸಾಲವನ್ನು ಮರುಪಾವತಿಸಲು ನಿರಾಕರಿಸುತ್ತಿದ್ದಾರೆ ಪರ್ಹಾದ್ ಅಮ್ರಾ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!