ಹೊಸದಿಗಂತ ಡಿಜಿಟಲ್ ಡೆಸ್ಕ್:
ʼಹಿಂದೂʼ ಪದದ ಅರ್ಥವೇ ಅಶ್ಲೀಲ ಎಂದಿದ್ದಸಚಿವ ಸತೀಶ್ ಜಾರಕಿಹೊಳಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ.
ಹಿಂದೂ ಧರ್ಮಕ್ಕೆ ನಿಂದನೆ ಮಾಡುವ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
2022ರ ನವೆಂಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜಾರಕಿಹೊಳಿ, ‘ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ’ ಎಂದಿದ್ದರು.
ಇಂತಹ ಸಮಾಜ ವಿರೋಧಿಗಳನ್ನು ಹುಟ್ಟಿಸಿದ್ದೆ ದೇವರ ತಪ್ಪು.
ಈಗಲಾದರೂ ಇಂಥವರನ್ನು ತನ್ನ ಸಮೀಪ ಕರೆದುಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸೋಣ!!