ಮಳಲಿ ಮಸೀದಿ ವಿವಾದ: ಜೂನ್ 9ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿಯಲ್ಲಿ ಮಸೀದಿ ನವೀಕರಣ ಮಾಡುವ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿದೆ.
ಏಪ್ರಿಲ್ 21ರಂದು ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.ಇಂದು ನಡೆದ ವಿಚಾರಣೆ ವೇಳೆ ಈ ವಿಚಾರದಲ್ಲಿ ನ್ಯಾಯಾಲಯದ ವ್ಯಾಪ್ತಿ ಬಗ್ಗೆ ವಾದ – ಪ್ರತಿವಾದ ನಡೆಯಿತು. ಅಂತಿಮವಾಗಿ ಜೂನ್ 9ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!