Saturday, December 20, 2025

ಸೌಜನ್ಯ ಪರ ಹೋರಾಟಗಾರ ಮಹೇಶ್​​ ಶೆಟ್ಟಿ ತಿಮರೋಡಿ ಗಡಿಪಾರಿಗೆ ಮತ್ತೆ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಾಮಾಜಿಕ ಹೋರಾಟಗಾರ ಮಹೇಶ್​​ ಶೆಟ್ಟಿ ತಿಮರೋಡಿಯನ್ನು ಮತ್ತೆ ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಎರಡನೇ ಬಾರಿಗೆ ಗಡಿಪಾರಿಗೆ ಪುತ್ತೂರು ಎ.ಸಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಇದೀಗ ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಮತ್ತೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18 ರಂದು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ .ಆದರೆ ತಿಮರೋಡಿ ಅವರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

error: Content is protected !!