ಸೌಜನ್ಯ ಹತ್ಯೆ ಪ್ರಕರಣ: ಮೂರೂ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾಗಿದ್ದ ಎಲ್ಲಾ ಮೂರು ಅರ್ಜಿಗಳನ್ನು ಹೈಕೋರ್ಟ್ ನ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ. ಜೆ.ಎಂ. ಖಾಜಿ ಅವರ ಪೀಠ ವಜಾ ಗೊಳಿಸಿದೆ.

ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂಬ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮೇಲ್ಮನವಿ ವಜಾಗೊಂಡಿದ್ದು, ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಇನ್ನು ಮರು ತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಕೂಡಾ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರ ಜೊತೆಗೆ ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ಕೂಡ ವಜಾಗೊಂಡಿದೆ.

2012ರ ಅ.9ರಂದು ಸೌಜನ್ಯಳನ್ನ ಅಪಹರಿಸಿ ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಸಂತೋಷ್‌ ರಾವ್‌ ಆರೋಪಿಯಾಗಿ‌ ಗುರುತಿಸಲಾಗಿದ್ದು, ತನಿಖೆ‌ ನಡೆಸಿದ ಸಿಬಿಐ, ಸಂತೋಷ್‌ ರಾವ್‌ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಸೆಷನ್ಸ್‌ ಕೋರ್ಟ್ ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ನನ್ನ 2023ರ ಜೂ.16ರಂದು ಸೆಷನ್ಸ್ ಕೋರ್ಟ್ ನಿರ್ದೋಶಿ ಎಂದು ಖುಲಾಸೆಗೊಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here