ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂತೋಷ್ ರಾವ್ ನ್ನು ಬೆಂಗಳೂರು ಸಿಬಿಐ ಕೋರ್ಟ್ ಖುಲಾಸೆ ಗೊಳಿಸಿದೆ.
ಘಟನೆ ನಡೆದ 11 ವರ್ಷಗಳ ಬಳಿಕಈಗ ತೀರ್ಪು ಹೊರಬಿದ್ದಿದೆ.
2012ರ ಅಕ್ಟೋಬರ್ 9 ರಂದು ಘಟನೆ ನಡೆದಿತ್ತು. ಅಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದ ಸೌಜನ್ಯ ನಾಪತ್ತೆಯಾಗಿದ್ದಳು.
ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಘಟನೆ ಸಂಬಂಧಿಸಿ ಶಂಕಿತ ಆರೋಪಿ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್ ಎಂಬಾತನನ್ನು ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು.ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ.