ಹೊಸದಿಗಂತ ಡಿಜಿಟಲ್ ಡೆಸ್ಕ್:
ಸತತ 20 ವರ್ಷಗಳ ಬಳಿಕ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಒಂದಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಮರಾಠಿ ವಿಜಯೋತ್ಸ’ವದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.
ಈ ಸಮಾರಂಭವನ್ನು ಶಿವಸೇನೆ (ಉದ್ಧವ್ ಬಣ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿತ್ತು.
2005ರಲ್ಲಿ ಭಿನ್ನಾಭಿಪ್ರಾಯದಿಂದ ಇಬ್ಬರೂ ಬೇರ್ಪಟ್ಟಿದ್ದರು. ಅದಾದ ಬಳಿಕ ನಾಯಕರು ಪರಸ್ಪರ ಒಂದೇ ವೇದಿಕೆ ಹಂಚಿಕೊಂಡಿದ್ದು ಇದೇ ಮೊದಲು.
ಮಹಾರಾಷ್ಟ್ರದ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸುವ ವಿವಾದಾತ್ಮಕ ನೀತಿಯನ್ನು ಆಡಳಿತಾರೂಢ ಮಹಾಯುತಿ ಒಕ್ಕೂಟ ಕೈಗೆತ್ತಿಕೊಂಡಿರುವುದು, ಠಾಕ್ರೆ ಸೋದರಸಂಬಂಧಿಗಳ ಈ ಒಗ್ಗಟ್ಟಿನ ಪ್ರದರ್ಶನಕ್ಕೆ ಕಾರಣವಾಗಿದೆ.