ಕೊಡಗಿನಲ್ಲಿ ಕೋವ್ಯಾಕ್ಸಿನ್‌ ಲಸಿಕೆ ಪಡೆಯಲು 42,214 ಮಂದಿ ಬಾಕಿ

ಹೊಸ ದಿಗಂತ ವರದಿ, ಮಡಿಕೇರಿ:

ಕೇಂದ್ರ ಸರ್ಕಾರವು 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಉಚಿತವಾಗಿ ಮುಂಜಾಗ್ರತಾ ಕೋವ್ಯಾಕ್ಸಿನ್ ಲಸಿಕೆ ಹಾಗೂ 15 ವರ್ಷ ಮೇಲ್ಪಟ್ಟವರಿಗೆ ಎರಡನೇ ವರಸೆಯ ಕೋವ್ಯಾಕ್ಸಿನ್ ಲಸಿಕೆ ನೀಡುತ್ತಿದೆ.
ಕೊಡಗು ಜಿಲ್ಲೆಯಲ್ಲಿಯೂ ಕೂಡಾ ಎಲ್ಲಾ ಆರೋಗ್ಯ ಕೇಂದ್ರಗಳ ಲಸಿಕಾ ವಿಭಾಗದಲ್ಲಿ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎರಡನೇ ವರಸೆಗೆ ಬಾಕಿ ಇರುವ 15 ವರ್ಷ ಮೇಲ್ಪಟ್ಟ ಒಟ್ಟು 858 ಫಲಾನುಭವಿಗಳು ಹಾಗೂ ಎರಡನೇ ವರಸೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆದು 6 ತಿಂಗಳು ಪೂರೈಸಿರುವ 18 ವರ್ಷ ಮೇಲ್ಪಟ್ಟ ಒಟ್ಟು 42,214 ಫಲಾನುಭವಿಗಳು ಮುಂಜಾಗ್ರತಾ ಕೋವಿಡ್ ಲಸಿಕಾಕರಣಕ್ಕೆ ಬಾಕಿ ಇದ್ದಾರೆ.
ಈ ಎಲ್ಲಾ ಅರ್ಹ ಫಲಾನುಭವಿಗಳು ತಮ್ಮ ಸಮೀಪದ ಆರೋಗ್ಯ ಕೇಂದ್ರದಲ್ಲಿ ಪ್ರತಿ ದಿನ ನಡೆಯುವ ಲಸಿಕಾ ಶಿಬಿರದಲ್ಲಿ ಕೋವ್ಯಾಕ್ಸಿನ್ ಲಸಿಕೆಯನ್ನು ಹಾಕಿಸಿ ಸದುಪಯೋಗಪಡೆದುಕೊಳ್ಳುವಂತೆ ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಹೇಳಿಕೆಯಲ್ಲಿ ಕೋರಿವೆ.
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್  ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!