ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
‘ಭಾರತ್ ಬಯೋಟೆಕ್’ ಕಂಪನಿಯ ಬೆಂಗಳೂರಿನ ಹೊಸ ಘಟಕಕ್ಕೆ ಅಂದಾಜು 65 ಕೋಟಿ ಹಣಕಾಸು ನೆರವನ್ನು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ.
‘ಕೊವ್ಯಾಕ್ಸಿನ್’ ಲಸಿಕೆ ಉತ್ಪಾದನೆ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಮೂರು ಸರ್ಕಾರಿ ಸ್ವಾಮ್ಯದ ಕಂಪನಿಗಳೂ ಬೆಂಬಲ ನೀಡಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹೇಳಿರುವುದಾಗಿ ‘ಎಎನ್ಐ’ ಟ್ವೀಟ್ ಮಾಡಿದೆ.
ಕೊವ್ಯಾಕ್ಸಿನ್ ಲಸಿಕೆಯ ಈಗಿನ ಉತ್ಪಾದನಾ ಸಾಮರ್ಥ್ಯವನ್ನು ಮೇ-ಜೂನ್ ಅವಧಿಗೆ ದ್ವಿಗುಣಗೊಳಿಸಲಾಗುವುದು. ಜುಲೈ-ಆಗಸ್ಟ್ ಅವಧಿ ವೇಳೆಗೆ ಉತ್ಪಾದನಾ ಸಾಮರ್ಥ್ಯವನ್ನು 6-7 ಪಟ್ಟು ಹೆಚ್ಚಿಸಲಾಗುವುದು. ಸೆಪ್ಟೆಂಬರ್ ವೇಳೆಗೆ ಉತ್ಪಾದನಾ ಸಾಮರ್ಥ್ಯವನ್ನು ತಿಂಗಳಿಗೆ 10 ಕೋಟಿ ಡೋಸ್ಗೆ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಸಚಿವಾಲಯ ಹೇಳಿದೆ.
The current production capacity of Covaxin vaccine will be doubled by May-June 2021 and then increased nearly 6-7 fold by July-Aug 2021. It is expected to reach nearly 10 crore doses per month by Sep 2021: Ministry of Science & Technology pic.twitter.com/4IECdBFUK7
— ANI (@ANI) May 12, 2021