spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ʼಡೆಲ್ಟಾʼ ವಿರುದ್ಧ ಕೋವ್ಯಾಕ್ಸಿನ್‌ ಲಸಿಕೆ ಶೇ. 50ರಷ್ಟು ಪರಿಣಾಮಕಾರಿ: ವರದಿ

- Advertisement -Nitte

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:

ಕೋವಿಡ್‌ ರೂಪಾಂತರಿ ʼಡೆಲ್ಟಾʼ ವಿರುದ್ಧ ಕೋವ್ಯಾಕ್ಸಿನ್‌ನ ಎರಡು ಡೋಸ್‌ಗಳು ಶೇಕಡಾ 50 ರಷ್ಟು ಪರಿಣಾಮಕಾರಿ ಎಂದು  ʼ ದಿ ಲ್ಯಾಟಿನ್‌ ಇನ್‌ಫೆಕ್ಷಿಯಸ್‌ ಡಿಸೀಸ್‌ ಜರ್ನಲ್‌ʼನಲ್ಲಿ ಪ್ರಕಟವಾದ ವರದಿಯೊಂದು ತಿಳಿಸಿದೆ.

ಕೋವಿಡ್‌ ಸೋಂಕಿನ ವಿರುದ್ಧ ಹೋರಾಡುವ  ಕೋವ್ಯಾಕ್ಸಿನ್‌ ಎರಡು ಡೋಸ್‌ಗಳ ಪರಿಣಾಮಕಾರಿತ್ವ ಶೇ.77.8ರಷ್ಟಿದೆ.  ಲಸಿಕೆಯ ಸುರಕ್ಷತೆ ಬಗ್ಗೆ  ಯಾವುದೇ ಆತಂಕ ಬೇಡ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ 2,714  ಸಿಬ್ಬಂದಿಯನ್ನು ಏಪ್ರಿಲ್ 15 ರಿಂದ ಮೇ 15 ರವರೆಗೆ ಅಧ್ಯಯನಕ್ಕೆ ಬಳಸಿಕೊಳ್ಳಲಾಗಿತ್ತು.

ಅಧ್ಯಯನದ ಅವಧಿಯ ಸಂದರ್ಭದಲ್ಲಿ ಭಾರತದಲ್ಲಿ ಡೆಲ್ಟಾ ರೂಪಾಂತರಿ ಪ್ರಕರಣ ಹೆಚ್ಚಿತ್ತು. ದೇಶದಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಸರಿಸುಮಾರು 80 ಪ್ರತಿಶತ ಡೆಲ್ಟಾ ಸೋಂಕಿತರೇ ಇದ್ದರು ಎಂದು ಸಂಶೋಧಕರು ತಿಳಿಸಿದ್ದಾರೆ.

ಕೋವಾಕ್ಸಿನ್ ಅನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ, ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಎನ್‌ಐವಿ-ಐಸಿಎಂಆರ್) ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ್ದು, 28 ​​ದಿನಗಳ ಅಂತರದಲ್ಲಿ ಎರಡು-ಡೋಸ್ ಗಳನ್ನು ನೀಡಲಾಗುತ್ತದೆ.

ಈ ವರ್ಷದ ಜನವರಿಯಲ್ಲಿ, ಕೋವಾಕ್ಸಿನ್ ಅನ್ನು ಭಾರತದಲ್ಲಿ 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ತುರ್ತು ಬಳಕೆಗಾಗಿ ಅನುಮೋದಿಸಲಾಗಿದೆ. ಇತ್ತೀಚೆಗಷ್ಟೆ ವಿಶ್ವ ಆರೋಗ್ಯ ಸಂಸ್ಥೆ ಕೋವ್ಯಾಕ್ಸಿನ್‌ ತುರ್ತು ಬಳಕೆಗೆ ಅನುಮೋದನೆ ನೀಡಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss