Thursday, June 1, 2023

Latest Posts

COVID UPDATE| ದೇಶದಲ್ಲಿ ಕೊರೊನಾ ಕಹಳೆ: 24ಗಂಟೆಗಳಲ್ಲಿ 7,171 ಹೊಸ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದಲ್ಲಿ ಕೊರೊನಾ ಹಾವಳಿ ಮುಂದುವರಿದಿದೆ. ನಿತ್ಯ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,171 ಹೊಸ ಕರಣ ಸೋಂಕುಗಳು ದಾಖಲಾಗಿವೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ 51,314 ಕ್ಕೆ ಇಳಿದಿದೆ. ಆದರೆ ಕೊರೊನಾ ಸೋಂಕಿನಿಂದ 40 ಮಂದಿ ಸಾವನ್ನಪ್ಪಿದ್ದಾರೆ. ಕೇರಳವೊಂದರಲ್ಲೇ 15 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಇದುವರೆಗೆ ಸಾವಿನ ಸಂಖ್ಯೆ 5,31,508 ಕ್ಕೆ ಏರಿಕೆಯಾಗಿದೆ.

ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.49 ಕೋಟಿಯಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ ಶೇಕಡಾ 0.11 ರಷ್ಟಿದೆ. ಇದರೊಂದಿಗೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು 98.70 ಪ್ರತಿಶತದಷ್ಟು ದಾಖಲಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,43,56,693 ಕ್ಕೆ ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಮರಣ ಪ್ರಮಾಣವು 1.18 ಪ್ರತಿಶತದಷ್ಟು ದಾಖಲಾಗಿದೆ. ದೇಶದಲ್ಲಿ ಇದುವರೆಗೆ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!