ಕೇರಳಕ್ಕೆ ಮತ್ತೆ ಕೋವಿಡ್ ಕಾಟ: ಎಲ್ಲಾ ಜಿಲ್ಲೆಗಳಿಗೆ ಖಡಕ್ ಎಚ್ಚರಿಕೆ ರವಾನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೇರಳದಲ್ಲಿಯೂ ಇದರ ಪರಿಣಾಮ ತೀವ್ರಗೊಂಡಿರುವುದು ಸ್ಪಷ್ಟವಾಗಿದೆ.
ಕೇರಳದಲ್ಲಿ ಕೋವಿಡ್ ಸ್ಥಿತಿಗತಿ ಪರಿಶೀಲನೆಗೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಕೋವಿಡ್ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಆಸ್ಪತ್ರೆಯ ಐಸಿಯು ಮತ್ತು ವೆಂಟಿಲೇಟರ್ ವ್ಯವಸ್ಥೆಯನ್ನು ಮತ್ತಷ್ಟು ಸಕ್ರಿಯಗೊಳಿಸಲು ಸಭೆ ನಿರ್ಧರಿಸಿದೆ.
ಕೋವಿಡ್‌ನ ಹೊಸ ರೂಪಾಂತರವು ಹೆಚ್ಚು ಸಾಂಕ್ರಾಮಿಕವಾಗಿದೆ. ಕೋವಿಡ್ ತಡೆಗಟ್ಟಲು ಮಾಸ್ಕ್ ಧರಿಸಬೇಕು. ಇತರೆ ಕಾಯಿಲೆ ಇರುವವರು, ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ವಿಶೇಷ ಕಾಳಜಿ ವಹಿಸಬೇಕು. ಸಾರ್ವಜನಿಕ ಸ್ಥಳಗಳಿಗೆ ಹೋಗುವಾಗ ಸರಿಯಾಗಿ ಮಾಸ್ಕ್ ಧರಿಸಬೇಕು. ಆಸ್ಪತ್ರೆಗೆ ಬರುವವರೆಲ್ಲರೂ ಮಾಸ್ಕ್ ಧರಿಸಬೇಕು ಎಂದು ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಸಧ್ಯ ತಿರುವನಂತಪುರ ಹಾಗೂ ಎರ್ನಾಕುಳಂ ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳಿವೆ. ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಕಣ್ಗಾವಲು ಬಿಗಿಗೊಳಿಸುವಂತೆ ಸೂಚಿಸಲಾಗಿದೆ ಎಂದು ಸಚಿವೆ ಇದೇ ಸಂದರ್ಭ ಮಾಧ್ಯಮಗಳಿಗೆ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!