ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ 2ನೇ ಅಲೆ| ವೈದ್ಯಕೀಯ ಮೂಲಸೌಕರ್ಯ, ಮಾನವ ಸಂಪನ್ಮೂಲ ವ್ಯವಸ್ಥೆಯತ್ತ ಗಮನ: ಸಚಿವ ಕೆ.ಎಸ್. ಈಶ್ವರಪ್ಪ

ಹೊಸದಿಗಂತ ವರದಿ, ಶಿವಮೊಗ್ಗ:

ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯ, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶನಿವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಎದುರಿಸಲು ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದರು.

ಮೆಗ್ಗಾನ್‍ಗೆ ಹೆಚ್ಚುವರಿಯಾಗಿ ಅಗತ್ಯವಿರುವ 50 ನರ್ಸ್‍ ಹಾಗೂ ಡಿ ಗ್ರೂಪ್ ನೌಕರರನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ಪಡೆದುಕೊಳ್ಳಲಾಗಿದೆ. ಪ್ರಸ್ತುತ ಇರುವ ಆಕ್ಸಿಜನ್ ಬೆಡ್‍ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್  ಮಾತನಾಡಿ, ಕಳೆದ ಸೆಪ್ಟಂಬರ್ ನಲ್ಲಿ ಕರೋನಾ ಅತ್ಯಂತ ಹೆಚ್ಚಾಗಿದ್ದ ಸಂದರ್ಭದಲ್ಲಿ ರಚಿಸಲಾಗಿದ್ದ ವೈದ್ಯಕೀಯ ತಂಡಗಳನ್ನೇ ಈಗಲೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಕಳೆದ ಬಾರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಕರೋನಾ ಸೋಂಕಿತರ ಪ್ರಾಥಮಿಕ ತಪಾಸಣೆ ನಡೆಸಲಾಗುತ್ತಿತ್ತು. ಪ್ರಸ್ತುತ ಮೆಗ್ಗಾನ್‍ನಲ್ಲಿ ಮಾಡಲಾಗುತ್ತಿದ್ದು, ಇದನ್ನು 24×7 ಮಾಡಲಾಗುವುದು. ಮೆಗ್ಗಾನ್‍ನಲ್ಲಿ ಚಿಕಿತ್ಸೆ ಅಗತ್ಯವಿದ್ದವರನ್ನು ಮಾತ್ರ ದಾಖಲು ಮಾಡಿ ಉಳಿದವರನ್ನು ಹೋಂ ಐಸೋಲೇಷನ್ ಮಾಡಲಾಗುವುದು ಎಂದರು.

ಪ್ರಸ್ತುತ ಮೆಗ್ಗಾನ್ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೈಪ್‍ಲೈನ್ ಸೌಲಭ್ಯ ಸೇರಿದಂತೆ ಒಟ್ಟು 613 ಆಕ್ಸಿಜನ್ ಪಾಯಿಂಟ್ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ 500 ಆಕ್ಸಿಜನ್ ಪಾಯಿಂಟ್ ಕಲ್ಪಿಸುವುದರ ಕುರಿತು ಪ್ರಸ್ತಾವನೆಯನ್ನು ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss