ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 5.90 ಲಕ್ಷಕ್ಕೆ ಏರಿಕೆ: ನಿನ್ನೆ ಪತ್ತೆಯಾದ ಕೋವಿಡ್‌ ಪ್ರಕರಣಗಳೆಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 1,59,632 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ, ಶನಿವಾರ ಒಂದೇ ದಿನ 1,59,632 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 40,863 ಮಂದಿ ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,44,53,603ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್‌ ಸಕ್ರಿಯ ಸೋಂಕಿತರ ಸಂಖ್ಯೆ 5,90,611ಕ್ಕೆ ಏರಿಕೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಪತ್ತೆಯಾದ ದೇಶದಲ್ಲಿ ಇಲ್ಲಿಯವರೆಗೆ 151.58 ಕೋಟಿ ಕೊರೋನಾ ಡೋಸ್​ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!