ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1492ಕ್ಕೆ ಏರಿಕೆ: ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು

ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯಲ್ಲಿ ಗುರುವಾರ ಪೂರ್ವಾಹ್ನ 11ಗಂಟೆಗೆ ಕೊನೆಗೊಂಡಂತೆ ಕಳೆದ 24ಗಂಟೆಗಳಲ್ಲಿ ಮತ್ತೆ 416 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1492ಕ್ಕೆ ಏರಿಕೆಯಾಗಿದೆ.
ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗುರುವಾರ, ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪ್ರಸಕ್ತ 1492 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 187 ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇ.9.67ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!