ಕೊರೋನಾ ಸೋಂಕಿಗೆ ತುತ್ತಾಗಿರುವವರು ಯಾವಾಗ‌ ಲಸಿಕೆ ಪಡೆಯಬೇಕು? ಆರೋಗ್ಯ ಸಚಿವರು ಹೇಳಿದ್ದೇನು ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊರೋನಾ ಸೋಂಕಿಗೆ ತುತ್ತಾಗಿರುವವರು ಚೇತರಿಸಿಕೊಂಡ ಮೂರು ತಿಂಗಳ ನಂತರವೇ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರಚಿಸಿರುವ NEGVACನ ತಜ್ಞರು ಈ ಸಲಹೆ ನೀಡಿದ್ದಾರೆ. ಈ ಸಲಹೆ ಎರಡನೇ ಡೋಸ್‌ ಹಾಗೂ ಮುನ್ನೆಚ್ಚರಿಕೆಯ ಡೋಸ್‌ ಪಡೆಯಲು ಅರ್ಹರಿರುವವರಿಗೆ ಮಾತ್ರ ಅನ್ವಯಿಸಲಿದೆ ಎಂದು ಸ್ಪಷ್ಟಪಿಡಿಸಿದರು.
ಈಗಾಗಲೇ NEGVAC ನೀಡಿರುವ ಮಾರ್ಗಸೂಚಿಯಂತೆ ಆರೋಗ್ಯ ಕಾರ್ಯಕರ್ತರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಬೂಸ್ಟರ್‌ ಡೋಸ್ ನೀಡಲಾಗುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!