ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಕೋವಿಡ್ ಸೋಂಕು ಆತಂಕದ ಹಿನ್ನೆಲೆ ದಿಢೀರನೇ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಜುಲೈ 19ರಿಂದ ಲಾಕ್ ಡೌನ್ ಆರಂಭವಾಗಲಿದ್ದು, ಪ್ರತಿ ದಿನ ಮಧ್ಯರಾತ್ರಿ 12 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಜುಲೈ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯುಎಇ ಸುದೀರ್ಘ ಈದ್ ಅಲ್-ಅಧಾ ರಜಾದಿನಗಳು ಆರಂಭವಾಗುತ್ತಿವೆ. ಹೀಗಾಗಿ ಅಬುಧಾಬಿಗೆ ಬರುವವರ ಸಂಖ್ಯೆ ಹೆಚ್ಚಿರುವ ಕಾರಣ ಲಾಕ್ ಡೌನ್ ಘೋಷಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಡಬ್ಲ್ಯುಎಎಂ ಸುದ್ದಿ ಸಂಸ್ಥೆ ತಿಳಿಸಿದೆ.