ಕೋವಿಡ್ ಬೂಸ್ಟರ್ ಡೋಸ್: ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ನಿರ್ಧಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಬೂಸ್ಟರ್ ಡೋಸ್​ ಪಡೆದುಕೊಳ್ಳುವ ಅಂತರದಲ್ಲಿ ಇಳಿಕೆ ಮಾಡಿದ್ದು, ಇನ್ಮುಂದೆ ಕೋವಿಡ್​ ವ್ಯಾಕ್ಸಿನೇಷನ್​​​ ಪಡೆದುಕೊಂಡ 9 ತಿಂಗಳ ಬದಲಾಗಿ ಆರು ತಿಂಗಳಿಗೆ ಬೂಸ್ಟರ್ ಡೋಸ್ ಪಡೆದುಕೊಳ್ಳುವ ಅಧಿಸೂಚನೆ ಹೊರಡಿಸಿದೆ.
ಹೊಸ ಮಾರ್ಗಸೂಚಿ ಪ್ರಕಾರ, 9 ತಿಂಗಳು ಅಥವಾ 39 ವಾರಗಳ ಬದಲಾಗಿ 6 ತಿಂಗಳು ಅಥವಾ 26 ವಾರಗಳಲ್ಲಿ ಇದೀಗ 18-59 ವಯಸ್ಸಿನ ಫಲಾನುಭವಿಗಳು ಕೋವಿಡ್​ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ ಎಂದಿದೆ.
ಕೋವಿಡ್​​ನ ಎರಡನೇ ಡೋಸ್​ ಪಡೆದ ಆರು ತಿಂಗಳ ಬಳಿಕ ಫಲಾನುಭವಿಗಳು ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳಬಹುದಾಗಿದೆ. ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಈ ಸೋಂಕು ಲಭ್ಯವಿರುತ್ತದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!