ಏಪ್ರಿಲ್ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ: ಕೇಂದ್ರ ಸರ್ಕಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಶುಕ್ರವಾರ ಈ ಕುರಿತು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ 18 ವರ್ಷ ಮೇಲ್ಪಟ್ಟ ಜನಸಂಖ್ಯೆಯ ಗುಂಪಿಗೆ ಏಪ್ರಿಲ್ 10 ರಿಂದ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಹೇಳಿದೆ.
,ದೇಶದಲ್ಲಿ ಕೋವಿಡ್-19 ಎಕ್ಸ್ ಇ ನೂತನ ರೂಪಾಂತರ ಸೋಂಕಿನ ಮಾತು ಕೇಳಿಬರುತ್ತಿರುವಂತೆಯೇ ಕೇಂದ್ರ ಸರ್ಕಾರ ಕೋವಿಡ್-19 ವಿರುದ್ಧಬೂಸ್ಟರ್ ಡೋಸ್ ನೀಡಿಕೆಗೆ ಮುಂದಾಗಿದೆ.
.ಈ ಹಿಂದೆ ವೈದ್ಯಕೀಯ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ನೀಡಲಾಗಿತ್ತು. ಇದೀಗ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು, ಆ ಮೂಲಕ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೂಸ್ಟರ್ ಕೋವಿಡ್ ಲಸಿಕೆಯನ್ನು ನೀಡದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!