ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ತನಿಖೆಯು ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಬಿಸಿಯೂಟವಾಗಿದೆ. ನೀವು ಮುಡಾ, ವಕ್ಫ್ ಅಸ್ತ್ರವನ್ನು ಪ್ರಯತ್ನಿಸಿದರೆ ನಮ್ ಹತ್ರ ಕೋವಿಡ್ ಬ್ರಹ್ಮಾಸ್ತ್ರ ಇದೆ. ಇದು ಕಾಂಗ್ರೆಸ್ ಸರ್ಕಾರದ ಹೊಸ ಗೇಮ್ ಪ್ಲಾನ್ ಆಗಿದೆ.
ಹೌದು. ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ವರದಿಯ ಶಿಫಾರಸುಗಳನ್ನು ಜಾರಿಗೆ ತರಲು ವಿಧಾನಸೌಧದಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಸಂಬಂಧಿತ ಅಕ್ರಮಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.
ಚಾಮರಾಜನಗರ ಆಕ್ಸಿಜನ್ ದುರಂತ ಕೇಸ್ ರೀ ಓಪನ್ ಮಾಡಲು ತೀರ್ಮಾನಿಸಲಾಗಿದೆ. ಅಷ್ಟೇ ಅಲ್ಲ ಆರ್‌ಟಿಪಿಸಿಆರ್ ಟೆಸ್ಟ್‌ಕಿಟ್‌ನಲ್ಲಿ 500 ಕೋಟಿ ರೂ.ಗಿಂತಲೂ ಹೆಚ್ಚು ಹಗರಣ ಆಗಿದೆ. ಈ ಕುರಿತಂತೆಯೂ ತನಿಖೆ ನಡೆಸಲು ಸಂಪುಟ ಉಪಸಮಿತಿ ಸಭೆ ತೀರ್ಮಾನಿಸಿದೆ.