ದೇಶದಲ್ಲಿ ಐದು ಸಾವಿರದ ಗಡಿದಾಟಿ ಸಾಗುತ್ತಿದೆ ಕೋವಿಡ್ ವೈರಸ್: ನಂ.1 ಸ್ಥಾನದಲ್ಲಿದೆ ಕೇರಳ

ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೋವಿಡ್ ಮಹಾಮಾರಿಯ ಹಾವಳಿ ಸತತವಾಗಿ ಹೆಚ್ಚಳವಾಗುತ್ತಿದ್ದು, ಒಟ್ಟು ಸಕ್ರಿಯ ಪ್ರಕರಣಗಳು ಐದು ಸಾವಿರ ಗಡಿ ದಾಟಿ ಮುಂದಕ್ಕೆ ಸಾಗುತ್ತಿದೆ.
ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಕೇರಳ ನಂಬರ್ ಒನ್ ಸ್ಥಾನ ಕಾಯ್ದುಕೊಂಡಿದ್ದು, ದೇಶದಲ್ಲೇ ಅತಿ ಹೆಚ್ಚು ಅಂದರೆ 1679 ಪ್ರಕರಣಗಳು ಈ ರಾಜ್ಯದಲ್ಲಿವೆ. ನಂತರದ ಸ್ಥಾನದಲ್ಲಿ ಗುಜರಾತ್ ಇದ್ದು ಇಲ್ಲಿ 615 ಸೋಮಕಿತರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 596 ಹಾಗೂ ದಿಲ್ಲಿಯಲ್ಲಿ 592 ಸೋಂಕಿತರಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ವರದಿ ತಿಳಿಸಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಸರ್ಕಾರ, ಆಮ್ಲಜನಕ, ಐಸೋಲೇಷನ್ ಬೆಡ್‌ಗಳು, ವೆಂಟಿಲೇಟರ್‌ಗಳು ಮತ್ತು ಅಗತ್ಯ ಔಷಧಿಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಜನವರಿ 2025ರಿಂದ ಇದುವರೆಗೆ ದೇಶದಲ್ಲಿ 55 ಸಾವುಗಳಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!