ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 2,64,202 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ, ಕಳದ 24 ಗಂಟೆಗಳಲ್ಲಿ 2,64,202 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,65,82,129ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶೇ.6.7ರಷ್ಟು ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 315 ಮಂದಿ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಪೈಕಿ 3,48,24,706 ಮಂದಿ ಗುಣಮುಖರಾಗಿದ್ದಾರೆ.
ಈವರೆಗೆ 15.17 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ. ಇದರ ನಡುವೆ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಈವರೆಗೆ 5,753 ಸೋಂಕಿತರು ಪತ್ತೆಯಾಗಿದ್ದಾರೆ.