ಹೊಸ ದಿಗಂತ ಡಿಜಿಟಲ್‌ಡೆಸ್ಕ್:
ಕೇರಳ ರಾಜ್ಯದಲ್ಲಿ ಕೋವಿಡ್ ಮತ್ತಷ್ಟು ಏರಿಕೆ ಕಂಡಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.
ಇದುವರೆಗೆ ರಾಜ್ಯದಲ್ಲಿ ಕೋವಿಡ್‌ನಿಂದ ಉಂಟಾದ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಈ ನಡುವೆ ಸೋಂಕಿಗೊಳಗಾದ 358 ಮಂದಿ ಹೊಸದಾಗಿ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವೆ ಕೋವಿಡ್ ಪ್ರಕರಣ ಹೆಚ್ಚಳದ ಹಿನ್ನಲೆಯಲ್ಲಿ ಅಗತ್ಯ ಪರೀಕ್ಷೆಗಳನ್ನು ನಡೆಸುವಂತೆ ನಾವು ಜಿಲ್ಲೆಗಳಿಗೆ ಸೂಚನೆಗಳನ್ನು ನೀಡಿದ್ದೇವೆ. ರೋಗಿಗಳ ಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಅದೇ ಕಾರಣ ಎಂದು ಹೇಳಿದ್ದಾರೆ.
ಇದುವರೆಗೆ ವರದಿಯಾದ ಕೋವಿಡ್ ಪ್ರಕರಣಗಳಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದ್ದು, ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಆಂಧ್ರಪ್ರದೇಶಗಳು ನಂತರದ ಸ್ಥಾನದಲ್ಲಿವೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ