Sunday, August 14, 2022

Latest Posts

ಕೊಡಗು: ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಭಾನುವಾರ ಪೂರ್ವಾಹ್ನ 11ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 12 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಮಡಿಕೇರಿ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ತಲಾ 2 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 8 ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 35,304ರಷ್ಟಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ ಒಟ್ಟು 34,751 ಮಂದಿ ಗುಣಮುಖರಾದಂತಾಗಿದೆ. 430 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಸಕ್ರಿಯ ಪ್ರಕರಣಗಳ ಸಂಖ್ಯೆ‌123ಕ್ಕೆ‌ ಏರಿಕೆಯಾಗಿದ್ದು, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 21 ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇ.0.48ರಷ್ಟಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss