Monday, July 4, 2022

Latest Posts

ಕೊಡಗಿನಲ್ಲಿ ಕೊರೋನಾ ಸೋಂಕು‌ ಮತ್ತೆ ಏರಿಕೆ: ಹೊಸ ಪ್ರಕರಣಗಳೆಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ,

ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಲ್ಲಿ ಮತ್ತೆ ಏರಿಕೆಯಾಗಿದ್ದು, ಭಾನುವಾರ 71 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದರೆ, ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 17, ಸೋಮವಾರಪೇಟೆ ತಾಲೂಕಿನಲ್ಲಿ 29ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 25 ಪ್ರಕರಣಗಳು ವರದಿಯಾಗಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 30,970ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 101 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 30,194ರಷ್ಟಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 385 ಮಂದಿ ಸಾವಿಗೀಡಾಗಿದ್ದು, ಪ್ರಸಕ್ತ 391 ಸಕ್ರಿಯ ಪ್ರಕರಣಗಳಿವೆ.105 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ದರ‌ ಶೇ.2.89ರಷ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss