ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಕರ್ಫ್ಯೂ ಜಾರಿಯ ಬಳಿಕವೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಾರದ ಕಾರಣ, ಸದ್ಯ ಜಾರಿಯಲ್ಲಿರುವ ಕರ್ಫ್ಯೂ ನಿಯಮಗಳನ್ನು ಮೇ.10ರವರೆಗೆ ಮುಂದುವರೆಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರ, ಮೇ.10ರ ಬೆಳಗ್ಗೆ 7 ಗಂಟೆಯವರೆಗೆ ರಾಜ್ಯಾದ್ಯಂತ ಕರ್ಫ್ಯೂ ಮುಂದುವರೆಯಲಿದೆ ಎಂದು ತಿಳಿಸಿದೆ.
ಈ ವೇಳೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮೇ.10 ರವರೆಗೆ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದೆ.
ಕರ್ಫ್ಯೂ ಅವಧಿಯಲ್ಲಿ ಲಸಿಕಾ ಅಭಿಯಾನ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.