ಆಂಧ್ರದಲ್ಲಿ ಕೋವಿಡ್ ಆತಂಕ: ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರ ಪ್ರದೇಶದಲ್ಲಿ ಕೋವಿಡ್ ಸೋಂಕು ಹಾಗೂ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ತುಮಕೂರು ಜಿಲ್ಲೆಯ ಪಾವಗಡ-ಆಂಧ್ರ ಗಡಿಯಲ್ಲಿ ಎಂಟು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ, ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಗಡಿಯಲ್ಲಿ ಥರ್ಮಲ್ ಸ್ಕ್ಯಾನಿಂಗ್, ಪ್ರಯಾಣಿಕರ ಮಾಹಿತಿ ಸಂಗ್ರಹ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್‌ನ್ನು ಸಜ್ಜುಗೊಳಿಸಲಾಗಿದ್ದು, ಅಗತ್ಯ ಬೆಡ್‌ಗಳು ಹಾಗೂ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. … Continue reading ಆಂಧ್ರದಲ್ಲಿ ಕೋವಿಡ್ ಆತಂಕ: ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್