Sunday, August 14, 2022

Latest Posts

COVID COUNT| ಎಚ್ಚರ ಅತ್ಯಗತ್ಯ: ಏರಿಕೆಯಾಗ್ತಿದೆ ಕೊರೋನಾ ಸಕ್ರಿಯ ಸೋಂಕಿತರ ಸಂಖ್ಯೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 42,618  ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 45,352 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಇಳಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 36,385 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,21,00,001ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,05,681 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 330 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,40,225 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss