ಪ್ರಧಾನಿ ನೇತೃತ್ವದಲ್ಲಿ ಕೋವಿಡ್ ತುರ್ತು ಸಭೆ: ರಿಪೋರ್ಟ್ ಪಡೆದುಕೊಂಡ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೋವಿಡ್ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂಜೆ ಕರೆದಿದ್ದ ಉನ್ನತ ಅಧಿಕಾರಿಗಳ ಸಭೆ ಪೂರ್ಣಗೊಂಡಿದೆ.
ಸಭೆಯಲ್ಲಿ ಸಧ್ಯದ ಕೋವಿಡ್ ಸ್ಥಿತಿಗತಿಗಳ ಬಗ್ಗೆ ವಿಸ್ತೃತ ಚರ್ಚೆಗಳು ನಡೆದವು. ದೇಶದಲ್ಲಿ ಕೊರೊನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಸದ್ಯದ ಕೊರೊನಾ ಪರಿಸ್ಥಿತಿ, ಅದಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಭೆ ಚರ್ಚೆ ನಡೆಸಿದೆ.
ಇದೇ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪ್ರಧಾನಿಯವರು ಮಾಹಿತಿ ಪಡೆದುಕೊಂಡಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಕೋವಿಡ್ ಪ್ರಕರಣಗಳು ನ್ನಷ್ಟು ಹೆಚ್ಚಳವಾದಲ್ಲಿ ಶೀಘ್ರವೇ ಸೂಕ್ತ ಕ್ರಮಕ್ಕೆ ಮುಂದಾಗಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!