ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮತ್ತೆ ಆತಂಕ ಹೆಚ್ಚಿಸಿರುವ ಕೋವಿಡ್ ಈಗ ಗಣಿಗಳ ನಾಡು ಬಳ್ಳಾರಿಗೂ ಕಾಲಿಟ್ಟಿದ್ದು, ಇಲ್ಲಿನ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಸೋಂಕಿಗೊಳಗಾಗಿದ್ದಾರೆ.
ಪಾಸಿಟಿವ್ ಕೇಸ್ ಪತ್ತೆಯಾಗುತ್ತಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಸೋಂಕಿತರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಅವರ ಟ್ರಾವಲ್ ಹಿಸ್ಟರಿ ಸಂಗ್ರಹ ಮಾಡಲಾಗುತ್ತಿದೆ.
ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೊಳಗಾಗಿದ್ದ ಈ ಕಾರ್ಮಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವ್ಯಾಪಕ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.