ಎಲ್ಲೆಡೆ ವ್ಯಾಪಿಸುತ್ತಿದೆ ಕೋವಿಡ್ ಮಹಾಮಾರಿ: ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಖಡಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಗತ್ತಿನಲ್ಲಿ ಕೋವಿಡ್ ಕೇಸ್ ಮತ್ತೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಲ್ಲಾ ದೇಶಗಳಿಗೆ ಕಣ್ಗಾವಲು ಹೆಚ್ಚಿಸಿ ಸೂಕ್ತ ಕ್ರಮ ಕೈಗೆತ್ತಿಕೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದೆ.

ಕೋವಿಡ್ ವಿವಿಧ ಮಾದರಿಯಲ್ಲಿ ರೂಪಾಂತರಗೊಳ್ಳುತ್ತಿದೆ. ಈಗ ಕಾಡುತ್ತಿರುವ ಜೆಎನ್.1ನಿಂದ ಜೀವಾಪಾಯ ಕಡಿಮೆ ಇದ್ದರೂ ಇದನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಎಲ್ಲಾ ದೇಶಗಳು ಈ ವೈರಸ್ ಮೇಲೆ ಕಣ್ಗಾವಲು ಇಡಬೇಕು. ಡೇಟಾ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

ಅತ್ಯಂತ ವೇಗವಾಗಿ ಹರಡುವ ಈ ರೂಪಾಂತರಿ ಕೋವಿಡ್ ಪ್ರಕರಣ ಹೆಚ್ಚಿಸುತ್ತಿದೆ. ಚಳಿಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಇದರ ಅಪಾಯ ಇನ್ನಷ್ಟು ಹೆಚ್ಚಾಗಿದೆ. ಜೊತೆಗೆ ರಜಾ ಕಾಲವಾದ್ದರಿಂದ ಜನರು ವಿವಿಧೆಡೆ ಪ್ರಯಾಣ ಬೆಳೆಸುತ್ತಿದ್ದಾರೆ. ಹೀಗಾಗಿ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು, ಸೋಂಕಿತರಿಗೆ ಸಕಾಲದಲ್ಲಿ ವೈದ್ಯಕೀಯ ನೆರವು ಒದಗಿಸಬೇಕು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!