ಕೇಂದ್ರದಿಂದ ಕೋವಿಡ್ ಗೈಡ್‌ಲೈನ್ಸ್: ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯಗಳಿಗೆ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಕೊರೋನಾ ವೈರಸ್ ರೂಪಾಂತರಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ RT-PCR, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಿದೆ.

ಐಎಲ್​ಐ, ಸ್ಯಾರಿ ಕೇಸ್​ಗಳ ಮೇಲೆ ನಿಗಾ ಇಡಲು ಚಿಕಿತ್ಸೆಗೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ. RT-PCR ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್​ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಹೊಣೆ ನೀಡಿದೆ.

ಹೆಚ್ಚಿನ ಸಂಖ್ಯೆಯ RT-PCR ಪರೀಕ್ಷೆ ಮಾಡುವುದದು ಮತ್ತು ಜೀನೋಮ್ ಅನುಕ್ರಮಕ್ಕಾಗಿ ಧನಾತ್ಮಕ ಮಾದರಿಗಳನ್ನು ಭಾರತೀಯ SARS COV-2 ಜೀನೋಮಿಕ್ಸ್ ಕನ್ಸೋರ್ಟಿಯಮ್ ಪ್ರಯೋಗಾಲಯಗಳಿಗೆ ಕಳುಹಿಸಿ, ಇದರಿಂದ ದೇಶದಲ್ಲಿ ಯಾವುದಾದರೂ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಸಾಧ್ಯವಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!