ಕೋವಿಡ್ ಗೈಡ್‌ಲೈನ್: ಮಕ್ಕಳಲ್ಲಿ ಸೋಂಕು ಕಂಡಲ್ಲಿ ಶಾಲೆ ಸೀಲ್‌ಡೌನ್ ಆಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರವಷ್ಟೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ನಗರ ವ್ಯಾಪ್ತಿಗೆ ಅನ್ವಯಿಸಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ಅಪಾರ್ಟ್‌ಮೆಂಟ್ ಗಳಲ್ಲಿನ  ಕೋವಿಡ್ ಟೆಸ್ಟ್, ಚಿಕಿತ್ಸೆ, ಕ್ವಾರಂಟೈನ್ ಕುರಿತು ಮಾರ್ಗಸೂಚಿಯಲ್ಲಿ ತುಸು ಪರಿಷ್ಕರಣೆ ಮಾಡಲಾಗಿದೆ.
ಸೋಂಕು ಕಂಡು ಬಂದರೆ ಶಾಲೆಗಳನ್ನು ಮುಚ್ಚುವ ಅಥವಾ ಅಪಾರ್ಟ್’ಮೆಂಟ್ ಗಳನ್ನು ಸೀಲ್ ಡೌನ್ ಮಾಡುವ ಅಗತ್ಯವಿಲ್ಲ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಶಾಲೆಗಳಲ್ಲಿ ಸೋಂಕು ಕಂಡುಬಂದ ಮಕ್ಕಳನ್ನು ಶಾಲೆಗೆ ಹಾಜರಾಗದಂತೆ ಸೂಚಿಸಬೇಕು. ರೋಗ ಲಕ್ಷಣ ಹೊಂದಿರುವವರನ್ನು ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆಗೆ ಒಳಪಡಿಸಬೇಕು, ಸೋಂಕು ದೃಢಪಟ್ಟರೆ ಹೋಂ ಐಸೋಲೇಷನ್, ಕೋವಿಡ್ ಆರೈಕೆ ಕೇಂದ್ರ, ಆಸ್ಪತ್ರೆಗೆ ದಾಖಲಿಸಬೇಕು.  ವರದಿ ನೆಗೆಟಿವ್ ಬಂದರಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ವರದಿ ಬರುವವರೆಗೂ ನಿಗಾದಲ್ಲಿ ಇರಿಸಿ ಬಳಿಕ ಕ್ರಮ ಕೈಗೊಳ್ಳಬೇಕು. ಆರ್‌ಟಿಪಿಸಿಆರ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟು ಸಿಟಿ ವ್ಯಾಲ್ಯೂ 25 ಇದ್ದಲ್ಲಿ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸೋಂಕು ಕಂಡು ಬಂತು ಎಂದು ಶಾಲೆಗಳನ್ನು ಮುಚ್ಚುವ ಅಥವಾ ಅಪಾರ್ಟ್‌ಮೆಂಟ್‌ಗಳನ್ನು ಸೀಲ್ ಡೌನ್ ಮಾಡುವ ಅಗತ್ಯವಿಲ್ಲ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಅಪಾರ್ಟ್‌ಮೆಂಟ್ ಗಳಲ್ಲಿ ೩ ರಿಂದ ೫ ಪ್ರಕರಣಗಳು ವರದಿಯಾದಲ್ಲಿ ಸಣ್ಣ ಕ್ಲಸ್ಟರ್‌ಎಂದು ಪರಿಗಣಿಸಬೇಕು,  5ಕ್ಕಿಂತ ಹೆಚ್ಚು ಪ್ರಕರಣ ವರದಿಯಾದಲ್ಲಿ ದೊಡ್ಡ ಕ್ಲಸ್ಟರ್ ಎಂದು ಪರಿಗಣಿಸಬೇಕು. ರ್ನಿಷ್ಟ ಬ್ಲಾಕ್‌ನ ಫ್ಲೋರ್‌ನಲ್ಲಿ ಸೋಂಕು ಲಕ್ಷಣ ಹೊಂದಿರುವ ಎಲ್ಲರನ್ನೂ ಪರೀಕ್ಷೆಗೊಳಪಡಿಸಬೇಕು ಎಂದೂ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!