ಹೊಸದಿಗಂತ ಆನ್ಲೈನ್ನ ವಿನಮ್ರ ವಿನಂತಿ…
ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………..
ಹೊಸ ದಿಗಂತ ವರದಿ, ಸೋಮವಾರಪೇಟೆ:
ವ್ಯಾಪಕವಾಗಿ ಹರಡುತಿರುವ ಕೊರೋನಾ ನಿಯಂತ್ರಿಸಲು ಅಗತ್ಯ ಹಾಗೂ ತುರ್ತುಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸೋಮವಾರಪೇಟೆ ತಾಲೂಕು ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಶುಕ್ರವಾರ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ,ವೈದ್ಯಾಧಿಕಾರಿಗಳೊಂದಿಗೆ ಅವರು ಚರ್ಚೆ ನಡೆಸಿದರು.
ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ ಗಮನಿಸಿದ ಅವರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿದರು.
ಜಿಲ್ಲೆಯಲ್ಲಿ ಕೊರೋನಾದ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈ ಗೊಳ್ಳುತ್ತಿz. ಆದರೆ ಜನತೆ ಜಾಗೃತರಾಗಬೇಕು ಮತ್ತು ಸಹಕರಿಸಬೇಕು ಇಲ್ಲವಾದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತದೆ ಎಂದರು.
ಸೋಮವಾರಪೇಟೆ ತಾಲೂಕು ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಸಿದ್ಧಪಡಿಸಲಾಗುತ್ತಿದೆ ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತಿದೆ. ಸಾಮಾನ್ಯ ಆಸ್ಪತ್ರೆ ಹಾಗೂ ಕೋವಿಡ್ ಆಸ್ಪತ್ರೆಗೆ ಪ್ರತ್ಯೇಕ ಪ್ರವೇಶ ಮಾಡಲಾಗುವುದು. ಈಗ ಇರುವ ತುರ್ತು ಚಿಕಿತ್ಸಾ ಘಟಕ ಹಾಗೂ ವಾರ್ಡ್ಗಳನ್ನು ಕೋವಿಡ್ ಚಿಕಿತ್ಸೆಗಾಗಿ ಹಾಗೂ ಟ್ಯಾಕ್ಸಿ ಸ್ಟ್ಯಾಂಡ್ ಸಮೀಪವಿರುವ ಪ್ರಸೂತಿ ಹಾಗೂ ಆಪರೇಷನ್ ಥಿಯೇಟರ್ ಇರುವ ಕಟ್ಟಡವನ್ನು ಸಾಮಾನ್ಯ ರೋಗಿಗಳ ತಪಾಸಣೆ ಮತ್ತು ತುರ್ತುಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಆಸ್ಪತೆಯ ಆವರಣದಲ್ಲಿರುವ ಕೋವಿಡ್ ಪರೀಕ್ಷಾ ಕೇಂದ್ರ ಹಾಗೂ ಕೋವಿಡ್ ಲಸಿಕಾ ಕೇಂದ್ರಗಳನ್ನು ಬೇರೆ ಕಟ್ಟಡಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರ ಬಗ್ಗೆ ನಿಗಾವಹಿಸಬೇಕು ಹಾಗೂ ಸ್ಥಳೀಯ ಆಡಳಿತ ಗಮನಿಸಬೇಕೆಂದು ತಿಳಿಸಿದರು. ಈಗಾಗಲೇ ಸ್ಥಳೀಯವಾಗಿ ಟಾಸ್ಕ್ಪೋರ್ಸ್ ರಚಿಸಲಾಗಿದ್ದು ಹೊರಜಿಲ್ಲೆಗಳಿಂದ ಬಂದಿರುವ ಅಥವಾ ಕೋವಿಡ್ಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ಗಮನಕ್ಕೆ ತರಬೇಕೆಂದು ತಿಳಿಸಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ಮಾರ್ಗಸೂಚಿಯನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದೆಂದರು.
ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಂದ ಜಿಲ್ಲಾಧಿಕಾರಿಗಳು ಸದ್ಯದ ಪರಿಸ್ಥಿತಿತಯಲ್ಲಿ ಸಾಕಷ್ಟು ಸರಬರಾಜು ಆಗುತ್ತಿದೆ ಎಂದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಕಾರಿ ಡಾ.ಮೋಹನ್, ತಹಶೀಲ್ದಾರ್ ಗೋವಿಂದರಾಜು, ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಜಯಣ್ಣ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ, ವೈದ್ಯರಾದ ಡಾ.ಶಿವಪ್ರಸಾದ್, ಡಾ.ಸತೀಶ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.