ಕೇರಳದಲ್ಲಿ ಕೋವಿಡ್: ಪರಿಸ್ಥಿತಿ ಎದುರಿಸಲು ಹೇಗಿದೆ ಆರೋಗ್ಯ ಇಲಾಖೆ ತಯಾರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಾದ್ಯಂತ ಆತಂಕ ಹೆಚ್ಚಿಸಿರುವ ಕೋವಿಡ್ ಉಪತಳಿ ಮೊದಲು ಕಾಣಿಸಿಕೊಂಡಿರುವ ಕೇರಳದಲ್ಲಿ ಈಗ ಸಮರೋಪಾದಿಯಲ್ಲಿ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ.

ಡಿ.19ರವರೆಗೆ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 1192 ಆಸ್ಪತ್ರೆಗಳಲ್ಲಿ ಕೋವಿಡ್ ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 1957 ಆಮ್ಲಜನಕ ಸಹಿತ ಹಾಸಿಗೆ, 2454 ಐಸಿಯು ಹಾಸಿಗೆ ಇವೆ. 937 ವೆಂಟಿಲೇಟರ್‌ಗಳನ್ನು ಸಿದ್ಧಪಡಿಸಲಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ಕೋವಿಡ್‌ನಿಂದಾಗಿ ಈವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೃತಪಟ್ಟಿದ್ದಾರೆ ಎಂದು ಹೇಳಲಾದವರು, ಈ ಮೊದಲೇ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವರು. ಹೀಗಾಗಿ ಕೇರಳದಲ್ಲಿ ಕೋವಿಡ್ ಹರಡುವಿಕೆ ಕುರಿತಂತೆ ಯಾವುದೇ ತಪ್ಪು ಮಾಹಿತಿಯನ್ನು ಜನರಿಗೆ ನೀಡಿ ಭಯಪಡಿಸಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!