spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಟಫ್ ರೂಲ್ಸ್ ಮಧ್ಯೆಯೂ ಕೋವಿಡ್ ಹೆಚ್ಚಳ: ಇಂದು ಸಿಎಂ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಕೈಮೀರುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಯಲಿದೆ.

ಸಿಎಂ ಬೊಮ್ಮಾಯಿಗೂ ಕೋವಿಡ್ ತಗುಲಿರುವುದರಿಂದ ಅವರು ಐಸೋಲೇಟ್ ಆಗಿದ್ದಾರೆ. ವಿಡಿಯೋ ಮುಖೇನ ಸಭೆ ನಡೆಯಲಿದೆ. ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇತರ ಗಣ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಮಾಡಲಾಗಿದೆ. ಇದರ ಅವಧಿ ಬುಧವಾರಕ್ಕೆ ಮುಗಿಯಲಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಕಠಿಣ ನಿಯಗಳಿದ್ದರೂ ಕೊರೋನಾ ಸಂಖ್ಯೆ ಹೆಚ್ಚುತ್ತಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

 

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap